ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು (15000 Teacher post in Karnataka in 2022 ) ಒಟ್ಟು ಹದಿನೈದು ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರವು ನಿರ್ಧರಿಸಿರುವುದಾಗಿ ಮಾನ್ಯ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿರುತ್ತಾರೆ.
15000 Teacher post in Karnataka in 2022

Yadagiri anganwadi recruitment 2022
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದಗಳ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರುಹತ್ತು ಸಾವಿರ ಹುದ್ದೆಗಳು
ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 5 ಸಾವಿರ ಹುದ್ದೆಗಳ ಭರ್ತಿಗಾಗಿ ಕೆಲವೇ ದಿನಗಳಲ್ಲಿ ನೇಮಕ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಲಾಗುವುದಾಗಿ ತಿಳಿಸಿರುತ್ತಾರೆ.
ಈ ಮೂಲಕ ರಾಜ್ಯದಲ್ಲಿರುವ ಶಿಕ್ಷಕರ ಕೊರತೆಯನ್ನು ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ನಿರ್ಧರಿಸಲಾಗಿದೆ. ಹಾಗೂ ಈಗಾಗಲೇ ರಾಜ್ಯದಲ್ಲಿ 23 ಸಾವಿರ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಕೂಡ ನಿರ್ಧರಿಸಿರುವುದಾಗಿ ಅವರು ಮಾಹಿತಿ ನೀಡಿರುತ್ತಾರೆ.