ಮಂಡ್ಯ ಜಿಲ್ಲೆಯ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2021. anganwadi recruitment 2021

ಮಂಡ್ಯ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ (anganwadi recruitment 2021) 08 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆಯರು, 30 ಮಿನಿ ಅಂಗನವಾಡಿ ಕಾರ್ಯಕರ್ತೆಯರು, ಮತ್ತು 32 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿ೦ದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ ಹಾಗೂ ಈ ಕೆಳಕಂಡ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿ ವೆಬ್‌ಸೈಟ್‌ನಿಂದಲೂ ವಿವರಗಳನ್ನು ಪಡೆಯಬಹುದಾಗಿದೆ.

Indian navy Sailor SSR recruitment 2021

ಒಟ್ಟು ಹುದ್ದೆಗಳು

ಒಟ್ಟು 112 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ

ಮಂಡ್ಯ ಜಿಲ್ಲೆಯಲ್ಲಿ

ಅರ್ಜಿಶುಲ್ಕ

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 0/-ರೂಗಳು

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 0/-ರೂಗಳು

ಆಯ್ಕೆ ವಿಧಾನ

ಮೇರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ

ಕನಿಷ್ಠ ವಯೋಮಿತಿ : 18 ವರ್ಷ

ಗರಿಷ್ಠ ವಯೋಮಿತಿ: 35 ವರ್ಷ

ಮುಖ್ಯದಿನಾಂಕಗಳು

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 18-10-2021

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 15-11-2021

ವಿದ್ಯಾರ್ಹತೆ

ಅಂಗನವಾಡಿ ಸಹಾಯಕಿ ಹುದ್ದೆಗೆ: 4-9ನೇ ತರಗತಿಯಲ್ಲಿ ಪಾಸ್ ಆಗಿರಬೇಕು

ಅಂಗನವಾಡಿ ಟೀಚರ್ ಹುದ್ದೆಗೆ: 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು

ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು

ಅರ್ಜಿ ನಿಗದಿತ ನಮೂನೆಯಲ್ಲಿ (ಆನ್‌ಲೈನ್ )

ಜನನ ಪ್ರಮಾಣಪತ್ರ / ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ

ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ

ತಹಶಿಲ್ದಾರರು | ಉಪತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ

ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ

ಪತಿಯ ಮರಣ ಪ್ರಮಾಣಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸಲಾಗುವುದಿಲ್ಲ)

ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣಪತ್ರ

ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸಲಾಗುವುದಿಲ್ಲ)

ವಿಚ್ಛೇದನ ಪ್ರಮಾಣಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)

APPLY NOW

NOTIFICATION

webaskit joi telegram channel

Leave a Reply

Your email address will not be published. Required fields are marked *