Anganwadi recruitment 2022 Karnataka ದಕ್ಷಿಣ ಕನ್ನಡ ಜಿಲ್ಲೆ, ರಾಮನಗರ ಜಿಲ್ಲೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಅಂಗನವಾಡಿ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

Anganwadi recruitment 2022 Karnataka: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆ, ರಾಮನಗರ ಜಿಲ್ಲೆ, ಶಿವಮೊಗ್ಗ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಕೆಳಗಿನ ಮಾಹಿತಿಗಳನ್ನು ತಿಳಿದು, ಆಸಕ್ತರು ಅರ್ಜಿ ಹಾಕಿ.

ಹುದ್ದೆಗಳ ವಿವಿರ

ದಕ್ಷಿಣ ಕನ್ನಡ ಜಿಲ್ಲೆ : 96

ರಾಮನಗರ ಜಿಲ್ಲೆ: 219

ಶಿವಮೊಗ್ಗ ಜಿಲ್ಲೆ: 95

Anganwadi recruitment 2022 Karnataka

ಮುಖ್ಯ ದಿನಾಂಕಗಳು

ಅಪ್ಲಿಕೇಶನ್‌ ಸಲ್ಲಿಸಲು ಆರಂಭ ದಿನಾಂಕ: 29-01-2022

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28-02-2022

ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಲ್‌ಸಿ/ 10ನೇ ತರಗತಿ ಪಾಸ್‌.

ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ ಪಾಸ್.

ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿರಬೇಕು.

ಆನ್‌ಲೈನ್ ಅಪ್ಲಿಕೇಶನ್‌ ಸಲ್ಲಿಸುವ ವಿಧಾನ

  • anganwadirecruit.kar.nic.in ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಿ.
  • ನೇಮಕಾತಿ ಬಯಸುವ ಜಿಲ್ಲೆ ಮತ್ತು ನೇಮಕಾತಿ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ
  •  ‘ಸಲ್ಲಿಸಿ’ ಎಂಬಲ್ಲಿ ಕ್ಲಿಕ್ ಮಾಡಿ
  • ಓಪನ್ ಆದ ಹೊಸ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ಟೈಪಿಸಿ ಅರ್ಜಿ ಸಲ್ಲಿಸಬಹುದು. ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಬೇಕು.

ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸುವಾಗ ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  1. ಜನನ ಪ್ರಮಾಣ ಪತ್ರ, SSLC ಅಂಕಪಟ್ಟಿ.
  2. ಜಾತಿ ಪ್ರಮಾಣ ಪತ್ರ.
  3. ತಾಹಶೀಲ್ದಾರರು/ಉಪತಾಹಶೀಲ್ದಾರರಿಂದ ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
  4. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರಗಳನ್ನು ಅಪ್‌ಲೋಡ್ ಮಾಡಬೇಕು.
  5. ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು SSLC ಅಂಕಪಟ್ಟಿಯನ್ನು, ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು 4ನೇ ತರಗತಿ ಪಾಸ್ ಮಾಡಿದ ಪ್ರಮಾಣ ಪತ್ರ ಅಥವಾ ಅಂಕಪಟ್ಟಿಯನ್ನು ಸ್ಕ್ಯಾನ್‌ ಮಾಡಿ ಅರ್ಜಿ ಸಲ್ಲಿಸುವ ವೇಳೆ ಅಪ್‌ಲೋಡ್ ಮಾಡಬೇಕು.
  6. ಯೋಜನಾ ನಿರಾಶ್ರಿತರಾಗಿದ್ದಲ್ಲಿ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.
  7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಅರ್ಜಿ ಸಲ್ಲಿಸುತ್ತಿದ್ದರೆ, ಆ ಬಗ್ಗೆ ಪ್ರಮಾಣ ಪತ್ರ.
  8. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪ್ರಮಾಣ ಪತ್ರ.(ಇದ್ದಲ್ಲಿ)
  9. ಇಲಾಖೆಯ ಸುಧಾರಣಾ ಸಂಸ್ಥೆ/ ರಾಜ್ಯ ಮಹಿಳಾ ನಿಲಯಗಳ ನಿವಾಸಿ ಆಗಿದ್ದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
  10. ಅಂಗವಿಕಲತೆ ಪ್ರಮಾಣ ಪತ್ರ(ಶೇ.60 ಕ್ಕಿಂತ ಕಡಿಮೆ ದೈಹಿಕ ಅಂಗವಿಕಲತೆ ಇದ್ದಲ್ಲಿ ಮಾತ್ರ).
  11. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ವಿಕಲಚೇತನರಿಗೆ ಅರ್ಜಿ ಸಲ್ಲಿಸಲು 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
  12. ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿದ್ದಲ್ಲಿ) ಲಗತ್ತಿಸಬಹುದು.
  13. ಮೇಲಿನ ಎಲ್ಲಾ ಮಾಹಿತಿಗಳನ್ನು ಆನ್‌ಲೈನ್‌ ಅರ್ಜಿ ಸಲ್ಲಿಸುವ ವೇಳೆ ಸ್ಕ್ಯಾನ್‌ ಕಾಪಿಗಳನ್ನು ಅಪ್‌ಲೋಡ್‌ ಮಾಡಬೇಕು.

Notification

Apply Now

Leave a Reply

Your email address will not be published. Required fields are marked *