B.Ed Admission 2023-24, 2 ವರ್ಷದ ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ: ಕಂಪ್ಲೀಟ್‌ ಡೀಟೇಲ್ಸ್‌ ಇಲ್ಲಿದೆ..

B.Ed Admission 2023-24 Karnataka: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2 ವರ್ಷ ಬಿ.ಇಡಿ ಕೋರ್ಸ್‌ ಅಡ್ಮಿಷನ್‌ಗೆ ಪ್ರಕಟಣೆ ಹೊರಡಿಸಿ, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಪ್ರಮುಖ ದಿನಾಂಕಗಳು, ಅರ್ಹತೆ, ಇತರೆ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.

B.Ed Admission 2023-24

2023-24ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 31-10-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29-11-2023

ಬಿ.ಇಡಿ ಕೋರ್ಸಿನ ಪ್ರವೇಶಕ್ಕೆ ಶೈಕ್ಷಣಿಕ ಅರ್ಹತೆಗಳು
– ಕನಿಷ್ಠ ಶೇಕಡ.50 ಅಂಕಗಳೊಂದಿಗೆ ಪದವಿ ಅಥವಾ ಶೇಕಡ.50 ಅಂಕಗಳೊಂದಿಗೆ ವಿಜ್ಞಾನ / ಸಾಮಾಜಿಕ ವಿಜ್ಞಾನಗಳು / ಮಾನವಿಕ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿರಬೇಕು.
– ಕನಿಷ್ಠ ಶೇಕಡ.55 ರಷ್ಟು ಅಂಕಗಳೊಂದಿಗೆ ಇಂಜಿನಿಯರಿಂಗ್ನಲ್ಲಿ ಪದವಿ / ವಿಜ್ಞಾನ ಮತ್ತು ಗಣಿತಶಾಸ್ತ್ರದಲ್ಲಿ ಪರಿಣಿತ ಪಡೆದಿರುವ ತಂತ್ರಜ್ಞಾನ ಅಥವಾ ಇನ್ಯಾವುದೇ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ಆನ್‌ಲೈನ್‌ ಅಪ್ಲಿಕೇಶನ್‌ ಶುಲ್ಕ ವಿವರ
ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗ, ಪ್ರವರ್ಗ-1 ಅಭ್ಯರ್ಥಿಗಳಿಗೆ : ರೂ.100
ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ.
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : ರೂ.300

ಬಿ.ಇಡಿ ಕೋರ್ಸಿನ ಪ್ರವೇಶಕ್ಕೆ ಅಭ್ಯರ್ಥಿಗಳ ಆಯ್ಕೆ ವಿಧಾನ
ಅಭ್ಯರ್ಥಿಗಳಿಂದ ಸ್ವೀಕೃತವಾದ ಆನ್‌ಲೈನ್‌ ಅರ್ಜಿಗಳಲ್ಲಿ ನೀಡಿರುವ ಮಾಹಿತಿಯ ಆಧಾರದ ಮೇಲೆ ಅರ್ಹತಾ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಪದವಿ ಶಿಕ್ಷಣದ ಅಂಕಗಳ ಆಧಾರದಲ್ಲಿ ಮೆರಿಟ್‌ ಪಟ್ಟಿ ಸಿದ್ಧಪಡಿಸಿ, ಕೌನ್ಸಿಲಿಂಗ್‌ ನಡೆಸಿ, ಸೀಟು ಹಂಚಿಕೆ ಮಾಡಲಾಗುತ್ತದೆ.

ಕೋರ್ಸಿಗೆ ದಾಖಲಾತಿ ಸಂದರ್ಭದಲ್ಲಿ ಪಾವತಿಸಬೇಕಾದ ಶುಲ್ಕದ ವಿವರ
ಕಲಾ ವಿಭಾಗದ ಪ್ರವೇಶಾತಿಗೆ ಶುಲ್ಕದ ವಿವರ
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ.5,025.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ.6,025.
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ.10,025.

ವಿಜ್ಞಾನ ವಿಭಾಗದಲ್ಲಿ ಬಿ.ಇಡಿ ಕೋರ್ಸ್‌ ಪ್ರವೇಶಾತಿಗೆ ಶುಲ್ಕ
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ.5,175.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ.6,175.
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ.10,175.

ಸೀಟು ಹಂಚಿಕೆ ಕೌನ್ಸಿಲಿಂಗ್ ನಡೆಯುವ ಸ್ಥಳಗಳು
ಬಿ.ಇಡಿ ಕಾಲೇಜು / ಸಂಸ್ಥೆ ಹಂಚಿಕೆ ಸಹಿತ ಜಿಲ್ಲಾ ನೋಡಲ್ ಕೇಂದ್ರಗಳ ಹಂತದ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾಗಿದ್ದು, ಹಂಚಿಕೆಯಾದ ಸಂಸ್ಥೆ ಒಪ್ಪಿಗೆ ಇಲ್ಲದಿದ್ದ ಅಭ್ಯರ್ಥಿಗಳು ಕೌನ್ಸಿಲಿಂಗ್‌ ನಲ್ಲಿ ಭಾಗವಹಿಸಬಹುದು.

ಬಿ.ಇಡಿ ಕೋರ್ಸ್‌ ಆಕಾಂಕ್ಷಿ ಅಭ್ಯರ್ಥಿಗಳು ತಮ್ಮ ರ್ಯಾಂಕ್‌ ಅನ್ನು ಗಮನಿಸಿ ಕೌನ್ಸಿಲಿಂಗ್ ವೇಳಾಪಟ್ಟಿಯನ್ವಯ ನಿಗದಿತ ದಿನಾಂಕಗಳಲ್ಲಿ ಕೇಂದ್ರೀಕೃತ ದಾಖಲಾತಿ ಘಟಕ, ಕಾವೇರಿ ಭವನದ ಎದುರು, ಕೆ.ಜಿ ರಸ್ತೆ ಬೆಂಗಳೂರು – 560009 ಇಲ್ಲಿಗೆ ಹಾಜರಾಗುವುದು.

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ವೆಬ್‌ಸೈಟ್‌ ಲಿಂಕ್‌ಗೆ ಭೇಟಿ ನೀಡಿ, ಅಧಿಸೂಚನೆ ಚೆಕ್‌ ಮಾಡಿಕೊಳ್ಳಿ.

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ವಿಳಾಸ: https://schooleducation.karnataka.gov.in/

APPLY NOW

Leave a Reply

Your email address will not be published. Required fields are marked *