Bidar District Court Recruitment 2023| 12th pass | more details click here

Bidar District Court Recruitment 2023 : ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bidar District Court Recruitment 2023

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 09 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ4
ಕಲ್ಯಾಣ ಕರ್ನಾಟಕ ವೃಂದ5

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ ಮೂರು ವರ್ಷದ ಡಿಪ್ಲೋಮ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : Haveri Zilla Panchayat Recruitment 2023

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಒಂದು ನಿಮಿಷಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು 45 ನಿಮಿಷಗಳಲ್ಲಿ ಬೆರಳಚ್ಚು ಯಂತ್ರ/ಕಂಪ್ಯೂಟರ್ ಮುಖಾಂತರ ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : 7ನೇ 10ನೇ ಪಾಸಾದವರಿಗೆ ಅರ್ಜಿ ಅಹ್ವಾನ

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳು – ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 07, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 06, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 07, 2023

Bidar Court Recruitment 2023 : Important Links

NOTIFICATION (RPC)CLICK HERE
NOTIFICATION (KKR)CLICK HERE
APPLY ONLINECLICK HERE
teligram

Leave a Reply

Your email address will not be published. Required fields are marked *