BMTC Free Driving Training: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
www.udyogmahiti.com
BMTC Free Driving Training 2022
ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿಎಸ್‌ಪಿ) ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ನೀಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ವಾಹನ ಚಾಲನ ತರಬೇತಿ ನೀಡುವ ಜತೆಗೆ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಚಾಲನ ಅನುಜ್ಞಾ ಪತ್ರ / ಬ್ಯಾಡ್ಜ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಆಸಕ್ತ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸದರಿ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು / ಸಲ್ಲಿಸಬೇಕಾದ ದಾಖಲಾತಿಗಳ ವಿವರಗಳನ್ನು ಈ ಕೆಳಕಂಡಂತೆ ನೀಡಲಾಗಿದೆ.
ಲಘು ವಾಹನ ಚಾಲನಾ ತರಬೇತಿ (ಕಾರ್/ ಜೀಪ್)

- ಕನಿಷ್ಠ 18 ವರ್ಷ ವಯೋಮಿತಿ ತುಂಬಿರಬೇಕು. ಗರಿಷ್ಠ 45 ವರ್ಷ ಮೀರಿರಬಾರದು.
- ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣ ಪತ್ರ ಅಥವಾ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ ನೋಟರಿಯಿಂದ ಪ್ರಮಾಣ ಪತ್ರ ಪಡೆದಿರಬೇಕು.
- ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ-5
ಭಾರಿ ವಾಹನ ಚಾಲನಾ ತರಬೇತಿ (ಬಸ್)

- ಕನಿಷ್ಠ 20 ವರ್ಷ ವಯೋಮಿತಿ ತುಂಬಿರಬೇಕು. ಗರಿಷ್ಠ 45 ವರ್ಷ ಮೀರಿರಬಾರದು.
- ಲಘು ವಾಹನ ಚಾಲನಾ ಅನುಜ್ಞಾ ಪತ್ರ ಪಡೆದು ಒಂದು ವರ್ಷ ಪೂರೈಸಿರಬೇಕು.
- ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣ ಪತ್ರ ಅಥವಾ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ ನೋಟರಿಯಿಂದ ಪ್ರಮಾಣ ಪತ್ರ ಪಡೆದಿರಬೇಕು.
- ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ-5
ಲಘು / ಭಾರಿ ವಾಹನ ಚಾಲನಾ ತರಬೇತಿ ಅವಧಿ : 30 ದಿನಗಳು
ತರಬೇತಿ ಅವಧಿಯಲ್ಲಿ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ಉಚಿತವಾಗಿ ನೀಡಲಾಗುತ್ತದೆ.
ಮೇಲೆ ತಿಳಿಸಲಾದ ಅರ್ಹತೆ ಹೊಂದಿದ್ದು, ಆಸಕ್ತಿ ಇರುವ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಮತ್ತು 02 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ
ADDRESS
ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕೇಂದ್ರ ಕಛೇರಿ, 3ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು-560027 ಇಲ್ಲಿ ಗೆ ಹೆಸರು ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ.
ಹೆಸರು ನೋಂದಾವಣೆ ಆರಂಭ ದಿನಾಂಕ: 01-08-2022
ಇತರೆ ಹೆಚ್ಚಿನ ಮಾಹಿತಿಗೆ ಸಂಸ್ಥೆಯ ವೆಬ್ ವಿಳಾಸ: www.mybmtc.com