ಗ್ರಾಮ ಪಂಚಾಯತಿಯಲ್ಲಿ 5980 ಡೇಟಾ ಎಂಟ್ರಿ ಆಪರೇಟರ್ ನೇರ ನೇಮಕಾತಿ 2023, gram panchayat data entry operator

gram panchayat data entry operator: ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಒಂದರಂತೆ 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಸೂಚನೆ ನೀಡಿದೆ.

ಪಂಚಾಯತ್ ರಾಜ ಇಲಾಖೆಯಿಂದ ಹುದ್ದೆ ಭತಿಗೆ ಸೂಚನೆ

ಗ್ರಾಮ ಪಂಚಾಯಿತಿಗಳಲ್ಲಿ ಕೆಲಸದ ಒತ್ತಡ ನಿರ್ವಹಣೆ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಹುದ್ದೆ ಭರ್ತಿಗೆ ನೇರ ನೇಮಕಾತಿಗೆ ಸದರಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಜಿಲ್ಲಾ ಪಂಚಾಯಿತಿಯ ಸಿಇಒ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳತಕ್ಕದ್ದು ಹಾಗೂ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಕನಿಷ್ಠ 16,738 ರೂ. ವೇತನ ನಿಗದಿಪಡಿಸಲಾಗಿದೆ. ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನ ಪಾವತಿಸಬೇಕು ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಸೂಚಿಸಿದ್ದಾರೆ.

ನೇಮಕದಲ್ಲಿ ಮೊದಲ ಆದ್ಯತೆ ನೀಡಿ: ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ನೇಮಕಾತಿಯಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ನೌಕರರ ಸಂಘದ ಅಧ್ಯಕ್ಷ ಭೀಮರೆಡ್ಡಿ ಪಾಟೀಲ್‌ ಆಗ್ರಹಿಸಿದ್ದಾರೆ.

ಅರ್ಜಿಗಳು ಅತಿ ಶಿಘ್ರದಲ್ಲಿ ಪ್ರಾರಂಭವಾಗಲಿವೆ.

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

teligram

Leave a Reply

Your email address will not be published. Required fields are marked *