ರಾಜ್ಯ ಫಾರೆಸ್ಟ್ ಇಲಾಖೆಯ 339 ಫಾರೆಸ್ಟ್ ಗಾರ್ಡ್ ( Karnataka forest guard) ಹುದ್ದೆಗಳ ನೇಮಕ ಪ್ರಕ್ರಿಯೆಯ ಲಿಖಿತ ಪರೀಕ್ಷೆ ದಿನಾಂಕ ಬಿಡುಗಡೆ ಆಗಿದೆ. ಅಭ್ಯರ್ಥಿಗಳಿಗೆ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ಗೆ ಎಸ್‌ಎಂಎಸ್ ಮೂಲಕ ಸಂದೇಶ ಕಳುಹಿಸಲಾಗುತ್ತದೆ.
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು 339 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ. ಈ ಹುದ್ದೆಗಳಿಗೆ 2020 ರ ಮಾರ್ಚ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು.
339 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 05-12-2021 ರಂದು ಲಿಖಿತ ಪರೀಕ್ಷೆಯನ್ನು ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದೆ.
ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಿ ಅರ್ಹತೆ ಪಡೆದ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರವನ್ನು ಅರಣ್ಯ ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರ ಡೌನ್ಲೋಡ್ ಮಾಡಕೊಳ್ಳಬಹುದು. ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಲು ಆನ್‌ಲೈನ್ ಅರ್ಜಿ ಸಲ್ಲಿಸುವ ವೇಳೆ ನಮೂದಿಸಿದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಸಂದೇಶವನ್ನು ಕಳುಹಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಅರಣ್ಯ ರಕ್ಷಕ ಹುದ್ದೆಯ ಲಿಖಿತ ಪರೀಕ್ಷೆ ದಿನಾಂಕ: 05-12-2021
ಅರಣ್ಯ ರಕ್ಷಕ ಹುದ್ದೆಯ ಲಿಖಿತ ಪರೀಕ್ಷೆಗೆ ಏನೇನು ಓದಬೇಕು ಎಂದು ಈ ಕೆಳಗಿನಂತೆ ತಿಳಿಸಲಾಗಿದೆ.


Karnataka forest guard
Admit Card
official website
ಉಚಿತವಾಗಿ ದಿನಾಲು ಉದ್ಯೋಗ ಮಾಹಿತಿ ಪಡೆಯಲು ನಮ್ಮ ಉದ್ಯೋಗಮಾಹಿತಿ ಟೇಲಿಗ್ರಾಂಮ್ ಚಾನಲ್ಗೆ ಸೇರಿಕೊಳ್ಳಿ
