ಅಕ್ರಮ 554 ಕರ್ನಾಟಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ರದ್ದು ಪಡಿಸಿರುವ ಪರೀಕ್ಷೆ ಯಾವಾಗ? Karnataka psi recruitment 2022

Karnataka psi recruitment 2022, 554 ಕರ್ನಾಟಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆ ರದ್ದಾದ ಪರೀಕ್ಷೆಯನ್ನು ಯಾವಾಗ ನಡೆಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳಿಗೆ ವಯಸ್ಸು ಮೀರುವ ಆತಂಕವನ್ನು ಬಿಡಿ ಎಂದು ಸಮಾಧಾನ ಪಡಿಸಿದ್ದಾರೆ.

teligram

ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆ ರದ್ದು ಪಡಿಸಿರುವ ಪಿ ಎಸ್ ಐ ಪರೀಕ್ಷೆಯ ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.


ಸಚಿವರು, ಬುಧವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್ ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿ ಗಳಿಗೆ, ಈ ಕುರಿತು ಭರವಸೆ ನೀಡಿದ್ದು, ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.

ಪಿ ಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ, ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ, ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು, ಎಂದರು.


6432 ಬ್ಯಾಂಕ ಸಿಬ್ಬಂದಿಗಳ ನೇರ ನೇಮಕಾತಿ 


ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲಾ 56000 ಅಭ್ಯರ್ಥಿ ಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದರು

ಮರು ಪರೀಕ್ಷೆ ನಡೆಸುವುದು ತಡವಾದರೆ, ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರೆಸಿ, ಎಂದು ಸಚಿವರು ಕಿವಿಮಾತು ಹೇಳಿದರು.


554 ಕರ್ನಾಟಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ವೆಸಗಿ ಹಲವು ಹೊರ ಅಭ್ಯರ್ಥಿಗಳು ಮಾತ್ರವಲ್ಲದೇ ಪೊಲೀಸ್ ಇಲಾಖೆಯ ದೊಡ್ಡ ದೊಡ್ಡ ಅಧಿಕಾರಿಗಳು ಸಹ ಸಿಕ್ಕಿಬಿದ್ದಿದ್ದಾರೆ. ಈ ಅಕ್ರಮದ ಹಿನ್ನೆಲೆ ಇಡೀ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿದೆ. ಆದ್ದರಿಂದ ಹೊಸದಾಗಿಯೇ ಪರೀಕ್ಷೆಯನ್ನು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ.

ತನಿಖೆ ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದರ ನಿಖರತೆ ಇಲ್ಲ. ಆದ್ದರಿಂದ ಪಿಎಸ್‌ಐ ಹುದ್ದೆಗೆ ವಯೋಮಿತಿ ಮೀರುವ ಆತಂಕದಲ್ಲಿಯೂ ಹಲವು ಅಭ್ಯರ್ಥಿಗಳು ಇದ್ದಾರೆ.

Leave a Reply

Your email address will not be published. Required fields are marked *