ಕಲ್ಯಾಣ ಕರ್ನಾಟಕ ಖಾಲಿ ಹುದ್ದೆ ಭರ್ತಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ ತುಂಬಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿ ಎಲ್ಲ ಸಚಿವರಿಗೆ ಹಾಗೂ ಮುಖ್ಯ ಮಂತ್ರಿಗಳು ಹೊಂದಿರುವ ಖಾತೆಗಳಿಗೆ ಸಂಬಂಧಿಸಿದಂತೆ ಸಚಿವಾಲಯ ಮುಖ್ಯಸ್ಥರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಶೀಲ ನೆಗೆ ರಚನೆಯಾಗಿರುವ ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಆ.17ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸ್ಥಳೀಯ ವೃಂದದಲ್ಲಿನ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಭಾರತ ಸಂವಿಧಾನ ಅನುಚ್ಛೇದ 371 (ಜೆ) ಅಡಿಯಲ್ಲಿ ಇಲಾಖಾವಾರು ಭರ್ತಿ ಮಾಡಲು ಬಾಕಿ ಇರುವ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಹುದ್ದೆಗಳ ವಿವರಗಳನ್ನು ಪತ್ರದ ಜತೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದೆ.

ಉಳಿದಂತೆ 15,078 ಹುದ್ದೆಗಳು ಖಾಲಿ ಇದ್ದು ಭರ್ತಿ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ. ಇವುಗಳಲ್ಲಿ ಎ,ಬಿ,ಸಿ ಹಾಗೂ ಡಿ ವೃಂದದ ಹುದ್ದೆಗಳು ಸೇರಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 9,905 ವಿವಿಧ ಹುದ್ದೆಗಳನ್ನು ಬಡ್ತಿ ಮೂಲಕ ತುಂಬ ಬೇಕಿದ್ದು, ಈ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲು ಕ್ರಮ ಕೈಗೊಳ್ಳುವಂತೆಯೂ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *