Kodagu District Court Recruitment 2023 Apply Online

Kodagu District Court Recruitment 2023 : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Kodagu District Court Recruitment 2023 :

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶಿಕ ಜಾರಿಕಾರರು ಹಾಗೂ ಜವಾನ/ಸೇವಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 64 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

UDYOGMAHITI.COM
ಹುದ್ದೆಹುದ್ದೆಗಳ ಸಂಖ್ಯೆವೇತನ
ಶೀಘ್ರಲಿಪಿಗಾರರು ಗ್ರೇಡ್ 3227650-52650
ಬೆರಳಚ್ಚುಗಾರರು1721400-42000
ಬೆರಳಚ್ಚು ನಕಲುಗಾರರು721400-42000
ಆದೇಶಿಕ ಜಾರಿಕಾರರು819950-37900
ಜವಾನ/ಸೇವಕ3017000-28950

ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢದರ್ಜೆ (ಸೀನಿಯರ ಗ್ರೇಡ) ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢದರ್ಜೆ (ಸೀನಿಯರ ಗ್ರೇಡ) ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಸೆಕ್ರೆಟರಿಯಲ್ ಪ್ರಾಕ್ಟಿಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕಿರಿಯದರ್ಜೆ (ಜೂನಿಯರ್ ಗ್ರೇಡ) ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : Post Office Recruitment 2023

ಆದೇಶಿಕ ಜಾರಿಕಾರ – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಭಾರಿ/ ಲಘು ವಾಹನ ಚಾಲನಾ ಅನುಜ್ಞಾ ಪತ್ರ (driving license- HMV/LMV) ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು

ಜವಾನ/ ಸೇವಕ – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದುವ ಮತ್ತು ಬರೆಯಲು ಸಾಮರ್ಥ್ಯ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ್

UDYOGMAHITI.COM

ಆಯ್ಕೆ ವಿಧಾನ :
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಆದೇಶಿಕ ಜಾರಿಕಾರ, ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : Bidar District Court Recruitment 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 300
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 10, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 10, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 11, 2023

Kodagu Court Recruitment 2023 : Important Links

STENOGRAPHER NOTIFICATIONCLICK HERE
TYPIST NOTIFICATIONCLICK HERE
TYPIST COPYIST NOTIFICATIONCLICK HERE
PROCESS SERVER NOTIFICATIONCLICK HERE
PEON NOTIFICATIONCLICK HERE
APPLY ONLINECLICK HERE
Telegram Join LinkCLICK HERE
WhatsApp Channel LinkCLICK HERE
teligram

Leave a Reply

Your email address will not be published. Required fields are marked *