KPSC AE Recruitment 2022 Notification OUT | KPSC ಇಂದ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

KPSC AE Recruitment 2022: ಕೆಪಿಎಸ್‌ಸಿ’ಯು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್‌ ಬಿ ವೃಂದದ ಅಸಿಸ್ಟಂಟ್‌ ಇಂಜಿನಿಯರ್ ಹುದ್ದೆಗಳಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಹೆಚ್ಚಿನ ಮಾಹಿತಿ ಕೆಳಗಿನಂತಿದೆ

KPSC AE Recruitment 2022

KPSC AE Recruitment 2022: ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಬಿಇ ಪದವೀಧರರು ಆನ್‌ಲೈನ್ ಮೂಲಕ ಅರ್ಜಿ ಹಾಕಬಹುದು. ಅರ್ಜಿಗೆ ಮಾರ್ಚ್‌ 30 ರ ವರೆಗೆ ಅವಕಾಶ ಇರುತ್ತದೆ.

ನೇಮಕಾತಿ ಆಯೋಗ : ಕರ್ನಾಟಕ ಲೋಕಸೇವಾ ಆಯೋಗ

ಉದ್ಯೋಗ ಇಲಾಖೆ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

ಹುದ್ದೆ ಹೆಸರು : ಸಹಾಯಕ ಅಭಿಯಂತರರು ಗ್ರೇಡ್‌-1

ಹುದ್ದೆಗಳ ಸಂಖ್ಯೆ: 188 (129 NHK + 59 HK)

ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು

  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-02-2022
  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-03-2022 ರ ರಾತ್ರಿ 11-45 ರವರೆಗೆ.
  • ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 31-03-2022

ಅರ್ಜಿ ಶುಲ್ಕ ವಿವರ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : Rs.600+35
  • EWS, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : Rs.300+35
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : Rs.50+35
  • ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : 35rs

ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿಇ ಇನ್‌ ಸಿವಿಲ್‌ / ಪರಿಸರ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ ಅರ್ಹತೆಗಳು

  • ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಅರ್ಹತೆ ಕೆಳಗಿನಂತಿದೆ.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ.
  • EWS, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : 38 ವರ್ಷ.
  • ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : 40 ವರ್ಷ.

Apply Now

Notification

Leave a Reply

Your email address will not be published. Required fields are marked *