ಒಂದೇ ದಿನ 4 ಕೆಪಿಎಸ್ಸಿ ಪರೀಕ್ಷೆ ಬೇಡ, ದಿನಾಂಕ ಬದಲಿಸಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ, ಒಂದೇ ದಿನ 3 ವಿವಿಧ ಹುದ್ದೆ ಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿ ರುವುದರಿಂದ 3 ಪರೀಕ್ಷೆ ಬರೆಯಲು ಅರ್ಜಿ ಹಾಕಿರುವ ಪರೀಕ್ಷಾರ್ಥಿಗಳಿಗೆ ಸಮಸ್ಯೆಯಾ ಗಿದೆ. ಹೀಗಾಗಿ 3 ಪರೀಕ್ಷೆಗಳನ್ನು ಬೇರೆ ದಿನ ಗಳಲ್ಲಿ ನಡೆಸುವಂತೆ ಆಯೋಗಕ್ಕೆ ಸೂಚಿಸ ಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ, ಒಂದೇ ದಿನ 3 ವಿವಿಧ ಹುದ್ದೆ ಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿ ರುವುದರಿಂದ 3 ಪರೀಕ್ಷೆ ಬರೆಯಲು ಅರ್ಜಿ ಹಾಕಿರುವ ಪರೀಕ್ಷಾರ್ಥಿಗಳಿಗೆ ಸಮಸ್ಯೆಯಾ ಗಿದೆ. ಹೀಗಾಗಿ 3 ಪರೀಕ್ಷೆಗಳನ್ನು ಬೇರೆ ದಿನ ಗಳಲ್ಲಿ ನಡೆಸುವಂತೆ ಆಯೋಗಕ್ಕೆ ಸೂಚಿಸ ಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.ಕಳೆದ 5 ವರ್ಷಗಳಿಂದ ಹಲವು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೆಸಾವಿರಾರು ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ವಯೋಮಿತಿಗೆ ಸೂಕ್ತ ಉದ್ಯೋಗ ಸಿಗದೆ ಅನ್ಯಾಯಕ್ಕೊಳಗಾಗಿದ್ದಾರೆ. ಉದ್ಯೋಗಕ್ಕೆ ಸೇರಲು ಬಯಸಿ ಪ್ರತಿ ನೇಮಕಾತಿಗೂ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ

ಪರೀಕ್ಷೆ ದಿನಾಂಕ ಬದಲಿಸಿ

ಬೆಂಗಳೂರು: ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ನ.5ರಂದು ನಡೆಯಲಿರುವ ವಿವಿಧ ಲಿಖಿತ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕದಂದು ನಿಗದಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ನ.5ರಂದುಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್ಸಿ) ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರ 242 ಹುದ್ದೆಗಳಿಗೆ ಮತ್ತು ಸಹಕಾರ ಸಂಘಗಳ ನಿಬಂಧಕರ ಕಚೇರಿ ನಿರೀಕ್ಷಕರ 47 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಇದೇ ದಿನ ಐಬಿಪಿಎಸ್ ಪರೀಕ್ಷೆ ಮತ್ತು 454 ಸಿವಿಲ್‌ ಕಾನ್‌ಸ್ಟೆಬಲ್‌ ನೇಮಕಾತಿಗೂ ಲಿಖಿತ ಪರೀಕ್ಷೆ ನಿಗದಿಯಾಗಿದೆ.

ಈ ಬಗ್ಗೆ ‘ವಿಜಯವಾಣಿ ವರದಿ ಪ್ರಕಟ ಮಾಡಿ ಗಮನ ಸೆಳೆದಿತ್ತು. ಇದಕ್ಕೆ ಸ್ಪಂದಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದು, ಕಳೆದ 5 ವರ್ಷದಿಂದ ಸರ್ಕಾರದ ಅಭ್ಯರ್ಥಿಗಳು ವಿದ್ಯಾರ್ಹತೆಗೆ ಮತ್ತು ವಯೋಮಿತಿಗೆ ತಕ್ಕಂತೆ ಸರಿಯಾದ ಉದ್ಯೋಗ ಸಿಗದೆ ಅನ್ಯಾಯಕ್ಕೆ ಒಳಗಾಗಿದ್ದಾರೆ. ಅಲ್ಲದೆ, ನೇಮಕಾತಿಗೆ ಅರ್ಜಿ ಸಲ್ಲಿಸಿದ ಯುವಕ-ಯುವತಿಯರು ವರ್ಷಗಟ್ಟಲೇ ತಯಾರಿ ನಡೆಸುತ್ತಾರೆ. ಆದರೆ, ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಆಗಿರುವುದರಿಂದ ಗೊಂದಲ ಉಂಟಾಗಿದ್ದು, ಇದರಿಂದ ಹಲವು ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗುತ್ತಾರೆ. ಆದ್ದರಿಂದ ಕೆಪಿಎಸ್‌ಸಿ ಪರೀಕ್ಷೆಗಳನ್ನು ಬೇರೆ ದಿನಾಂಕಗಳಲ್ಲಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

teligram

Leave a Reply

Your email address will not be published. Required fields are marked *