kpsc group a selection list released ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಗ್ರೂಪ್ ಎ ವೃಂದದ ಸಹಾಯಕ ನಿಯಂತ್ರಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ತಾತ್ಕಾಲಿಕ ಆಯ್ಕೆಪಟ್ಟಿ ಮತ್ತು ಕಟ್‌ಆಫ್ ಅಂಕಗಳನ್ನು ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಗ್ರೂಪ್ ಎ ವೃಂದದ ಸಹಾಯಕ ನಿಯಂತ್ರಕರು ಉಳಿಕೆ ಮೂಲ ವೃಂದ 48+06 ಹೈ.ಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಾವಿಷನಲ್ ಸೆಲೆಕ್ಟ್ ಲಿಸ್ಟ್ ಹಾಗೂ ಕಟ್ ಆಫ್ ಅಂಕಗಳನ್ನು ಇದೀಗ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಿ ಸದರಿ ಪಟ್ಟಿ ಚೆಕ್ ಮಾಡಬಹುದು.
South East Central Railway Apprentice Recruitment 2022
ಈ ಮೇಲಿನ ಸದರಿ ಆಯ್ಕೆಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟವಾದ 07 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಗೆ ಕಳುಹಿಸಬಹುದು.
ಅಂಚೆ ಹಾಗೂ ಇ-ಮೇಲ್ ಮೂಖಾಂತರ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನಿಗದಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

