KSRTC Recruitment 2022 , ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಛೇರಿ ಸಹಾಯಕ– Apply for Office Assistant Post

KSRTC Recruitment 2022 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಛೇರಿ ಸಹಾಯಕ (ತೋಟಗಾರಿಕೆ) ದರ್ಜೆ IV ಪರಿಶಿಷ್ಟ ಜಾತಿ ಹಿಂಬಾಕಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSRTC Recruitment 2022

ಹುದ್ದೆ : ಕಚೇರಿ ಸಹಾಯಕ (ತೋಟಗಾರಿಕೆ)

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಏಳನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ದೇಹದಾರ್ಢ್ಯತೆ : ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸದರಿ ಹುದ್ದೆ ನಿರ್ವಹಿಸಲು ಸಶಕ್ತರಿರುವ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳಿಂದ ವೈದ್ಯಕೀಯ ಪ್ರಮಾಣ ಪತ್ರವು ಪಡೆಯುವುದು ಕಡ್ಡಾಯವಾಗಿರುತ್ತದೆ.

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 11,320 ರಿಂದ ರೂ. 15,010 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯ ನಂತರ ಹುದ್ದೆಗೆ ನಿಗದಿಪಡಿಸಲಾದ 7ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಇದರಲ್ಲಿ ಮೊದಲು 29 ರಿಂದ 40 ವರ್ಷದ ವಯೋಮಿತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ/ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕ), ಕ.ರಾ.ರ.ಸಾ. ನಿಗಮ, ಕೇಂದ್ರ ಕಚೇರಿ, ಬೆಂಗಳೂರು – 27

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 200 ಡಿಡಿಯನ್ನು “”CAO~FA, KSRTC, Central Office, Bangalore” ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :

  • ಅರ್ಜಿ ಶುಲ್ಕವನ್ನು ಬ್ಯಾಂಕಿನಲ್ಲಿ ಪಾವತಿಸಿರುವ ಮೂಲ ಡಿಮ್ಯಾಂಡ್ ಡ್ರಾಪ್ಟ್
  • 7ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯಲ್ಲಿ ಮುಖ್ಯೋಪಾಧ್ಯಾಯರಸಹಿಯ ಜೊತೆಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲು ಸಹಿಯುಳ್ಳ ಅಂಕಪಟ್ಟಿಯ ಪ್ರತಿ.
  • ಜಾತಿ ಪ್ರಮಾಣ ಪತ್ರದ ಪ್ರತಿ.
  • ಜನ್ಮ ದಿನಾಂಕದ ದಾಖಲೆಗಾಗಿ ಶಾಲಾ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 10, 2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 04, 2022

Official Notification

Leave a Reply

Your email address will not be published. Required fields are marked *