ಸಾರಿಗೆ ಇಲಾಖೆಯಲ್ಲಿ ಅತಿ ಶೀಘ್ರದಲ್ಲಿ 9000 ಸಿಬ್ಬಂದಿ ನೇಮಕಾತಿ ಈ ಕುರಿತು ಮಾಹಿತಿ ನಿಮಗಾಗಿ

ksrtc recruitment 2023 karnataka: ನಾನು ಸಾರಿಗೆ ಮಂತ್ರಿ ಆಗಿದ್ದಾಗ ನೇಮಕಾತಿ ಆಗಿದ್ದೇ ಕೊನೆ. ಕಳೆದ ಏಳು ವರ್ಷಗಳಲ್ಲಿ 13,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಈಗ 9 ಸಾವಿರ ಜನರನ್ನು ಹೊಸದಾಗಿ ನೇಮಕ ಮಾಡಿಕೊಳ್ಳುತ್ತಿದ್ದು, ಇದಕ್ಕೆ ಅನುಮತಿ ಸಿಕ್ಕಿದೆ. 5500 ಹೊಸ ಬಸ್ ಖರೀದಿ ಮಾಡಲಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸ್ವೀಕರಿಸಿದ್ದೇನೆ. ಪ್ರತಿಭಟನಾಕಾರರು ಕೊಟ್ಟಿರುವ ಮನವಿಗಳನ್ನು ಸಿಎಂಗೆ ಕೊಡುತ್ತೇನೆ. ಸರ್ಕಾರ ಕೂಡ ಅವರಿಗೆ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದರು.

UDYOGMAHITI.COM

 ಶಕ್ತಿ ಯೋಜನೆ ಜಾರಿ ಪರಿಣಾಮ ಶಾಲಾ ಮಕ್ಕಳಿಗೆ ಬಸ್‌ ಸಮಸ್ಯೆ ಆಗುತ್ತಿರುವ ಬಗ್ಗೆ ಮಾತನಾಡಿ, ಶಕ್ತಿ ಯೋಜನೆ ಕಾರ್ಯಕ್ರಮ ಆದಮೇಲೆ ಜನರು ಸರ್ಕಾರಿ ಬಸ್‌ಗಳಲ್ಲಿ ಹೆಚ್ಚು ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಮಾಡುತ್ತಿದ್ದಾರೆ ಶಾಲೆಗೆ ಬರುವಾಗ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ. ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು – ಬಸ್ ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು – ಹಳೆಯ ಬಸ್ ಸ್ಕ್ಯಾಪ್ ಮಾಡಬೇಕು. ಹೀಗೆ ಆಗಿದ್ರೆ – ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದು ತಿಳಿಸಿದರು.

Ballari District Court Recruitment 2023

Hassan Ayush Department Recruitment 2023

Gadag District Court Recruitment 2023

ಬೆಳಗಾವಿ ಸಾರಿಗೆ ವಿಭಾಗಕ್ಕೆ ಹಳೆ ಬಿಎಂಟಿಸಿ ಬಸ್‌ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿ, ಇಲ್ಲಿ 6 ಇಲ್ಲ ಅಂತಾ ತೆಗೆದುಕೊಂಡಿದ್ದಾರೆ, ಮತ್ತೆ ವಾಪಸ್ ಕಳುಹಿಸಿದ್ದಾರೆ ಎಂದರು. ಬಸ್‌ನಿಂದ ಬಿದ್ದು ವಿದ್ಯಾರ್ಥಿನಿ ಸಾವು ಮತ್ತು ಅಪಘಾತಗಳು ಸಂಭವಿಸುತ್ತಿರುವುದಕ್ಕೆ, ಸತತವಾಗಿ ನಾಲ್ಕು ವರ್ಷ ಬಸ್ ಖರೀದಿ ಮಾಡಿಲ್ಲ. ಏಳು ವರ್ಷಗಳಿಂದ ನೇಮಕಾತಿ ಮಾಡಿಲ್ಲ, ಹೀಗಾಗಿ ಸಮಸ್ಯೆ ಆಗುತ್ತಿದೆ. ಈಗ ಹೊಸ ಬಸ್ ಹಾಗೂ ಹೊಸ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಬೆಳಗಾವಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತಿ ಹೆಚ್ಚು ಬಸ್ ನಿಲ್ದಾಣ ನೀಡಿದ್ದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಎರಡು ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಿದ್ದೇನೆ. ಬೆಳಗಾವಿ ನಗರಕ್ಕೆ 100 ಹೊಸ ಬಸ್ ಖರೀದಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

Telegram Join LinkClick Here
WhatsApp Channel LinkClick Here

Leave a Reply

Your email address will not be published. Required fields are marked *