2021-22ನೇ ಸಾಲಿನ Post-Matric Scholarship Application “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ’’, ‘’ಶುಲ್ಕ ವಿನಾಯಿತಿ’’, ‘’ವಿದ್ಯಾಸಿರ-ಊಟ ಮತ್ತು ವಸತಿ ಸಹಾಯ’’ ಹಾಗೂ ‘’ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ’’ ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31.10.2021
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪುವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 31.10.2021 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೂಚನೆಗಳು,

- ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು,
- ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ ಸ್ಥಳೀಯ ಸಂಸ್ಥೆ/ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ – ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
- ಈ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರಾದವರು ಆನ್ ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು,
- ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಸೇರುವ ವಿದ್ಯಾರ್ಥಿಗಳು ಸದರಿ ಸೌಲಭ್ಯಕ್ಕಾಗಿ ಆಯಾಯ ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸುವುದು,
- “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ” ಮತ್ತು ವಿದ್ಯಾಸಿರಿ-“ಊಟ & ವಸತಿ ಸಹಾಯ ಯೋಜನೆ” ಸೌಲಭ್ಯ ಪಡೆಯಲು ವಿದ್ಯಾರ್ಥಿಯ ತಂದೆ-ತಾಯಿ/ಪೋಷಕರ ಕುಟುಂಬದ ಒಟ್ಟು ವಾರ್ಷಿಕ ವರಮಾನ (Gross Annual Income) ಈ ಕೆಳಗೆ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು, ಪ್ರವರ್ಗ -1 ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷಗಳು ಪ್ರವರ್ಗ-2ಎ, 3ಎ, 3ಬಿ ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ
- ಅ) (i) ವಿದ್ಯಾರ್ಥಿನಿಲಯದಲ್ಲಿ ಪ್ರವೇಶ (ii) ಊಟ ಮತ್ತು ವಸತಿ ಸಹಾಯ ಯೋಜನೆ (iii) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಇವುಗಳಲ್ಲಿ ಒಬ್ಬ ವಿದ್ಯಾರ್ಥಿಯು ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರು, ಆದರೆ ಶುಲವಿನಾಯಿತಿ ಸೌಲಭ್ಯವನ್ನು ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೂ ನೀಡಲಾಗುವುದು,
- ಆ) ವಿದ್ಯಾಸಿರಿ ಯೋಜನೆಯ ಸೌಲಭ್ಯವನ್ನು ಯಾವುದೇ ಇಲಾಖೆಯ ಸರ್ಕಾರಿ/ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುವುದು
- ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ (ಉದಾ: ಬಿ.ಎ. ನಂತರ ಬಿ.ಕಾಂ, ಎಂ.ಎ. (ಕನ್ನಡ) ನಂತರ ಎಂ.ಎ. (ಇಂಗ್ಲೀಷ್), ಬಿ.ಎಡ್ ನಂತರ ಎಲ್.ಎಲ್.ಬಿ,
Post-Matric Scholarship Application
ಹೊಸ ವಿದ್ಯಾರ್ಥಿಗಳು :- ಹೊಸದಾಗಿ ಅರ್ಜಿ ಸಲ್ಲಿಸುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಶುಲ್ಕ ವಿನಾಯಿತಿ/ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ಒಂದೇ ಅರ್ಜಿ ಸಲ್ಲಿಸಬೇಕು.
ನವೀಕರಣ ವಿದ್ಯಾರ್ಥಿಗಳು:- ಈಗಾಗಲೇ 2020-21ನೇ ಸಾಲಿನಲ್ಲಿ ಸಲ್ಲಿಸಿರುವ ಅರ್ಜಿ ಸಂಖ್ಯೆಯನ್ನು ನಮೂದಿಸಿ 2021-22 ನೇ ಸಾಲಿಗೆ ನವೀಕರಣ ಅರ್ಜಿಯನ್ನು ಸಲ್ಲಿಸಬೇಕು.
ಮೇಲ್ಕಂಡ ಎಲ್ಲಾ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಆಧಾರ್ ಸಂಖ್ಯೆಯ ಮಾಹಿತಿಗಳನ್ನು UIDAI ನಿಂದ ಪಡೆದು ಕೊಳ್ಳಲು ವಿದ್ಯಾರ್ಥಿಗಳು ಆಧಾರ್-ಕನ್ನೆಂಟ್ ನಮೂನೆಗೆ ದೃಢೀಕರಣವನ್ನು ಕಡ್ಡಾಯವಾಗಿ ಆನ್ ಲೈನ್ ನಲ್ಲಿ ನೀಡಬೇಕು.
ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು NPCI(National payment Corporation of India) ಮಾಪಿಂಗೆ ಮಾಡಿಸಬೇಕು. ತಪ್ಪಿದಲ್ಲಿ ಮಂಜೂರಾದ ಸೌಲಭ್ಯ ವಿದ್ಯಾರ್ಥಿಗಳ ಖಾತೆಗೆ ಜಮಾ ಆಗದಿದ್ದಲ್ಲಿ ಇಲಾಖೆ ಜವಾಬ್ದಾರಿಯಿಲ… ಹಾಗೂ ನಿಮ್ಮ ಬ್ಯಾಂಕ್ ಖಾತೆಗಳನ್ನು ಚಾಲನೆಯಲ್ಲಿ ಇಟ್ಟುಕೊಳ್ಳುವುದು ಸಹ ವಿದ್ಯಾರ್ಥಿಗಳ ಜವಾಬ್ದಾರಿಯಾಗಿರುತ್ತದೆ.
