sbi clerk 2023 notification, 8283 Post, Any Degree Pass/appearing

sbi clerk 2023 notification : SBI Junior Associate Vacancy, Age, Qualification, Salary Details : ಭಾರತೀಯ ಸ್ಟೇಟ್‌ ಬ್ಯಾಂಕ್ 8283 ಜೂನಿಯರ್ ಅಸೋಸಿಯೇಟ್‌ ಹುದ್ದೆಗಳನ್ನು ಭರ್ತಿ ಮಾಡಲು ಉದ್ಯೋಗ ಪ್ರಕಟಣೆ ಹೊರಡಿಸಿದೆ. ಯಾವುದೇ ಡಿಗ್ರಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹೈಲೈಟ್ಸ್‌:
  • ಎಸ್‌ಬಿಐ ನಿಂದ ಜೂನಿಯರ್ ಅಸೋಸಿಯೇಟ್‌ ನೇಮಕಾತಿ.
  • ಒಟ್ಟು 8283 ಹುದ್ದೆಗೆ ಅರ್ಜಿ ಆಹ್ವಾನ.
  • ಕರ್ನಾಟಕದಲ್ಲಿ 450 ಹುದ್ದೆಗಳು ಖಾಲಿ.

ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾವು 8283 ಜೂನಿಯರ್ ಅಸೋಸಿಯೇಟ್‌ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌) ಹುದ್ದೆಗಳ ನೇಮಕಾತಿಗೆ ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಯಾವುದೇ ಪದವಿ ಪಾಸ್‌ ಮಾಡಿದವರು ಈ ಹುದ್ದೆಗಳಿಗೆ ಅರ್ಹರು. ಅರ್ಜಿ ಸಲ್ಲಿಸಲು ಡಿಸೆಂಬರ್ 07 ರವರೆಗೆ ಅವಕಾಶ ನೀಡಲಾಗಿದ್ದು, ಅರ್ಜಿ ಲಿಂಕ್, ಇತರೆ ಹೆಚ್ಚಿನ ಮಾಹಿತಿಗಳನ್ನು ಕೆಳಗಿನಂತೆ ಓದಿಕೊಳ್ಳಿ.

ಅಪ್ಲಿಕೇಶನ್‌ ಸಲ್ಲಿಸಲು ಹಾಗೂ ಇತರೆ ಮಾಹಿತಿಗಾಗಿ ಎಸ್‌ಬಿಐ’ನ ಕರಿಯರ್‌ ವೆಬ್‌ಸೈಟ್‌ ವಿಳಾಸ https://sbi.co.in/web/careers ಗೆ ಭೇಟಿ ನೀಡಬಹುದು. ಒಬ್ಬ ಅಭ್ಯರ್ಥಿ ಒಂದು ರಾಜ್ಯದ ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಜನವರಿ 2024 ರಲ್ಲಿ ನಡೆಸಲಾಗುತ್ತದೆ.

ನೇಮಕಾತಿ ಬ್ಯಾಂಕ್ : ಭಾರತೀಯ ಸ್ಟೇಟ್ ಬ್ಯಾಂಕ್
ಹುದ್ದೆ ಹೆಸರು: ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌)
ಹುದ್ದೆಗಳ ಸಂಖ್ಯೆ : 8283
ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್‌ ಹುದ್ದೆಗಳ ಸಂಖ್ಯೆ : 450

ಎಸ್‌ಬಿಐ ಜೂನಿಯರ್ ಅಸೋಸಿಯೇಟ್ಸ್‌ ಗಳಿಗೆ ಶೈಕ್ಷಣಿಕ ಅರ್ಹತೆ
  • ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
  • ಯಾವುದೇ ಪದವಿಯ ಅಂತಿಮ ಸೆಮಿಸ್ಟರ್‌ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ವಯಸ್ಸಿನ ಅರ್ಹತೆಗಳು
  • ದಿನಾಂಕ 01-04-2023 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು.
  • ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.
ವೇತನ ಶ್ರೇಣಿ :

ರೂ.17900 – 47920.

ಸೆಲೆಕ್ಷನ್‌ ಪ್ರಕ್ರಿಯೆ ಹೇಗಿರುತ್ತದೆ?
  • ಆನ್‌ಲೈನ್‌ ಪ್ರಿಲಿಮ್ಸ್‌ ಪರೀಕ್ಷೆ, ಮೇನ್ಸ್‌ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
  • ಪ್ರಿಲಿಮ್ಸ್‌ / ಮೇನ್ಸ್‌ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಮೆರಿಟ್‌ ಆಧಾರದ ಮೇಲೆ 1:3 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಬ್ಯಾಂಕ್‌ ನಿಗದಿಪಡಿಸಿದ ಕನಿಷ್ಠ ಅಂಕಗಳನ್ನು ಅಭ್ಯರ್ಥಿಗಳು ಗಳಿಸಬೇಕು. ನಂತರ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07-12-2023
ಅಪ್ಲಿಕೇಶನ್‌ ಶುಲ್ಕ ವಿವರ
ಸಾಮಾನ್ಯ ಕೆಟಗರಿ / ಇತರೆ ಹಿಂದುಳಿದ ವರ್ಗಗಳು / EWS ಅಭ್ಯರ್ಥಿಗಳಿಗೆ ರೂ.750.
ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.
Important Links
Apply OnlineClick Here
NotificationClick Here
Official WebsiteClick Here
Join Telegram ChannelClick Here
Join WhatsApp ChannelClick Here

Leave a Reply

Your email address will not be published. Required fields are marked *