ಭಾರತೀಯ ಸ್ಟೇಟ್ ಬ್ಯಾಂಕ್ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, SBI PO admit card ಪೂರ್ವಭಾವಿ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು ಬ್ಯಾಂಕ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಲಾಗಿನ್ ಆಗುವ ಮೂಲಕ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಪಿಒ ಪ್ರಿಲಿಮ್ಸ್ ಪರೀಕ್ಷೆಯನ್ನು ಆಫ್‌ಲೈನ್ ಮಾದರಿಯಲ್ಲಿ ನಡೆಸಲಿದ್ದು, ನವೆಂಬರ್ 20, 21, 27, 2021 ರಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ನವೆಂಬರ್ 27 ರವರೆಗೂ ಅಡ್ಮಿಟ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಇರುತ್ತದೆ. ಆದರೆ ಯಾವ ಅಭ್ಯರ್ಥಿಗಳಿಗೆ ಯಾವ ದಿನಾಂಕದಂದು ಪರೀಕ್ಷೆ ಇರುತ್ತದೆ ಎಂದು ತಿಳಿದುಕೊಳ್ಳಲು ನವೆಂಬರ್ 20 ರೊಳಗೆಯೇ ಅಡ್ಮಿಟ್ ಕಾರ್ಡ್ ಅನ್ನು ಚೆಕ್ ಮಾಡಿಕೊಳ್ಳುವುದು ಉತ್ತಮ.
ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಈ ಕೆಳಗಿನ ವಿಧಾನಗಳನ್ನು ಫಾಲೋ ಮಾಡಿರಿ
- ಈ ಕೆಳಗಿನ ಡೈರೆಕ್ಟ್ ಲಿಂಕ್ ಅನ್ನು ಓಪನ್ ಮಾಡಿ
- ನಂತರ ಓಪನ್ ಆಗುವ ಪೇಜ್‌ನಲ್ಲಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ (ಪಾಸ್‌ವರ್ಡ್) ಮಾಹಿತಿ ನೀಡಿ ಲಾಗಿನ್ ಆಗಿ.
- ಅಡ್ಮಿಟ್ ಕಾರ್ಡ್ ಪ್ರದರ್ಶನವಾಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
SBI PO admit card
