SSC GD Notification 2023 | 10th Pass | 75768 Post

SSC GD Notification 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಕಾನ್ಸ್‌ಟೇಬಲ್‌ (ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC Constable GD Recruitment 2023 :

UDYOGMAHITI.COM

ಹುದ್ದೆ : ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 75,768 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

SSC ಕಾನ್ಸ್‌ಟೇಬಲ್‌ ಹುದ್ದೆಗಳ ವಿವರ (ವಿವಿಧ ಪಡೆಗಳು)

ಗಡಿ ಭದ್ರತಾ ಪಡೆ27875
ಕೇಂದ್ರ ಮೀಸಲು ಪೊಲೀಸ್ ಪಡೆ25427
ಕೇಂದ್ರ ಕೈಗಾರಿಕಾ ಭದ್ರತಾ ಪಡೆ8598
ಸಶಸ್ತ್ರ ಸೀಮಾ ಬಲ್5278
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌3006
ಅಸ್ಸಾಂ ರೈಫಲ್ಸ್‌4776
ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್‌583
ಒಟ್ಟು ಹುದ್ದೆಗಳ ಸಂಖ್ಯೆ75,768

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ : ದಿನಾಂಕ 01-08-2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE), ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET), ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST), ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
• ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET)

ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ ಬೃಹತ್ ನೇಮಕಾತಿ 2023 - SSC Constable GD Recruitment 2023


• ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST)

ಪುರುಷಮಹಿಳೆ
ಎತ್ತರ170 cms157 cms

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳಿಗೆ ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 24, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 28, 2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 29, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಫೆಬ್ರವರಿ, 2024

SSC GD Recruitment 2023 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Channel LinkClick Here

Leave a Reply

Your email address will not be published. Required fields are marked *