sslc result 2023 Karnataka: Karnataka School Examinations and Assessments Board will announce Karnataka SSLC Result 2023 today. Candidates can check KSEAB Class 10 results on the official site of Karnataka Results at karresults.nic.in.
SSLC RESULT 2023
SSLC RESULT 2023 ಬೆಂಗಳೂರು: ಚುನಾವಣೆಗೂ ಮುನ್ನವೇ ಎಸ್‌ಎಸ್ ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದ್ದು, ಸೋಮವಾರ (ಮೇ 8) ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಫಲಿತಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಆರ್. ರಾಮಚಂದ್ರನ್ ಸೋಮವಾರ ಬೆಳಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಿದ್ದಾರೆ. ಆ ನಂತರ 11 ಗಂಟೆಗೆ http://karresults.nic. in ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ. ಈ ಬಾರಿ 8. 42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದರು. ಮಾ.31ರಿಂದ ಏ.15 ರವರೆಗೆ 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಏ.24ರಿಂದ ಮೌಲ್ಯಮಾಪನ ನಡೆದಿದ್ದು, 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಂಡಿದ್ದರು.