ಹಾಸನ & ಶಿವಮೊಗ್ಗ ಜಿಲ್ಲೆ ಗ್ರಾಮಲೆಕ್ಕಿಗರ ನೇಮಕ ಹುದ್ದೆಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ, village accountant results

ಸರ್ಕಾರವು ಇತ್ತೀಚೆಗೆ ಗ್ರಾಮಲೆಕ್ಕಿಗರ ನೇಮಕಾತಿ ಪ್ರಕ್ರಿಯೆಗಳನ್ನು ಮುಂದುವರೆಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ 34 ವಿಲೇಜ್‌ ಅಕೌಂಟಂಟ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆಯ ಆಯ್ಕೆಪಟ್ಟಿ (ತಾತ್ಕಾಲಿಕ) ಬಿಡುಗಡೆ ಮಾಡಲಾಗಿದೆ. ಸದರಿ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.

ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 34 ಗ್ರಾಮಲೆಕ್ಕಿಗರ (Village Accountant) ನೇರ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಹಾಸನ ಜಿಲ್ಲಾ ಅಧಿಕೃತ ಸರ್ಕಾರಿ ವೆಬ್‌ಸೈಟ್‌ಗೆ ಭೇಟಿ ನೀಡಿ ಚೆಕ್‌ ಮಾಡಬಹುದು.

2020 ರಲ್ಲಿ ಅಧಿಸೂಚನೆ ಹೊರಡಿಸಿ ಆನ್‌ಲೈನ್‌ ಮೂಲಕ ಸ್ವೀಕೃತವಾದ ಒಟ್ಟು ಅರ್ಜಿಗಳಲ್ಲಿ 1:10 ಅನುಪಾತದ ಪ್ರಮಾಣದಲ್ಲಿ ಪರಿಶೀಲನಾ ಪಟ್ಟಿಯನ್ನು ತಯಾರಿಸಿ ಪ್ರಕಟಿಸಲಾಗಿತ್ತು. ನಂತರ ಈ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ಮೆರಿಟ್ ಹಾಗೂ ಮೀಸಲಾತಿ ಆಧಾರದಲ್ಲಿ ಒಟ್ಟು 34 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ತಯಾರಿಸಿ ಇದೀಗ ಬಿಡುಗಡೆ ಮಾಡಲಾಗಿದೆ.

ಹಾಸನ ತಾತ್ಕಾಲಿಕ ಆಯ್ಕೆಪಟ್ಟಿ

ಶಿವಮೊಗ್ಗ ಜಿಲ್ಲೆಯ ಗ್ರಾಮಲೆಕ್ಕಾಧಿಕಾರಿಗಳ ನೇರ ನೇಮಕಾತಿ 2019 ರ ಸಂಬಂಧ ದಾಖಲಾತಿಗಳ ಪರಿಶೀಲನೆಗಾಗಿ ದಿನಾಂಕ ನಿಗದಿಪಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸಿ, ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆಯನ್ನು ದಿನಾಂಕ 08-11-2021 ರಂದು ಬೆಳಿಗ್ಗೆ 10-00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ದಿನಾಂಕ 08-11-2021 ರಂದು ಈ ಕೆಳಕಂಡ ದಾಖಲಾತಿಗಳನ್ನು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿನ ಅಭ್ಯರ್ಥಿಗಳು ತೆಗೆದುಕೊಂಡು ಪರಿಶೀಲನೆಗೆ ಹಾಜರಾಗಲು ತಿಳಿಸಲಾಗಿದೆ.

ಮೆರಿಟ್ ಲಿಸ್ಟ್, ವರ್ಗಾವಾರು ತಾತ್ಕಾಲಿಕ ಆಯ್ಕೆಪಟ್ಟಿ

Leave a Reply

Your email address will not be published. Required fields are marked *